50 ವರ್ಷಗಳ ಹಿಂದಿನ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭ್ ಮನ್ ಗಿಲ್..! ಎನ್ ಅಂತೀರಾ ಇದರ ಬಗ್ಗೆ !!??

ಸ್ನೇಹಿತರೆ, ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಮನಮೋಹಕ 91 ರನ್ನ ಹಾಗೂ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಅವರ ಬಿರುಸಿನ 89 ರನ್ ಗಳ ಸಹಾಯದಿಂದ ಟೀಮ್ ಇಂಡಿಯಾ 3 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ ಅಂತ ಹೇಳಬಹುದು. ಬ್ರಿಸ್ಬೆನಾ ಗಬ್ಬಾದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ನಲ್ಲಿ ಗಿಲ್ 91 ರನ್ ಗಳ ಅದ್ಭುತ ಇನ್ನಿಂಗ್ಸನ್ನು ಆಡಿದ್ದರು.

ಇನ್ನಿಂಗ್ಸ್ ನೊಂದಿಗೆ ಭಾರತದ ಮಾಜಿ ಆರಂಭಿಕ ಆಟಗಾರ ಸುನಿಲ್ ಗವಾಸ್ಕರ್ ಅವರ 50 ವರ್ಷಗಳ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. ಹೌದು ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಅರ್ಧಶತಕ ಪೂರೈಸುವುದರೊಂದಿಗೆ ಭಾರತದಲ್ಲಿ ನಾಲ್ಕನೇ ಇನ್ನಿಂಗ್ಸ್ನಲ್ಲಿ ಅರ್ಧಶತಕ ಗಳಿಸಿದ ಇಂಡಿಯಾದ ಅತ್ಯಂತ ಕಿರಿಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಶುಭ್ ಮನ್ ಗಿಲ್ ಪಾತ್ರರಾಗಿದ್ದಾರೆ. ಇನ್ನು ಗಿಲ್ ಗೆ ಪ್ರಸ್ತುತ 21 ವರ್ಷ 133 ದಿನಗಳು.

ಅದೇ ಸಮಯದಲ್ಲಿ ಸುನಿಲ್ ಗವಾಸ್ಕರ್ ಅವರು 21 ವರ್ಷ ಮತ್ತು 243 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು. 1970 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪೋಸ್ಟ್ ಆಫ್ ಸ್ಪೇನ್ ನಲ್ಲಿ ಆಡಿದ ಟೆಸ್ಟ್ ಪಂದ್ಯದಲ್ಲಿ, ಅರ್ಧಶತಕ ಬಾರಿಸುವ ಮೂಲಕ ಭಾರತದ ಮಾಜಿ ನಾಯಕ ಈ ದಾಖಲೆ ಮಾಡಿದ್ದರು. ಇನ್ನು ಅಂತಿಮ ಟೆಸ್ಟ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಗಿಲ್ 146 ಎಸೆತಗಳಲ್ಲಿ 91 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರು.

ಇನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 369 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ 336 ರನ್ಗಳನ್ನು ಅಷ್ಟೇ ಗಳಿಸುವಲ್ಲಿ ಶಕ್ತರಾಗಿದ್ದರು. ಎರಡನೇ ಇನಿಂಗ್ಸ್ನಲ್ಲಿ ಆಸೀಸ್ ಬ್ಯಾಟ್ಸ್ ಮ್ಯಾನ್ ಗಳನ್ನು ಮೊಹಮ್ಮದ್ ಸಿರಾಜ್ ಹಾಗೂ ಶಾರ್ದುಲ್ ಠಾಕೂರ್ ವಿಕೆಟ್ ಪಡೆದು 294 ರನ್ ಗೆ all-out ಮಾಡುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಮೊದಲ ಇನ್ನಿಂಗ್ಸ್ ಹಿನ್ನಡೆಯೊಂದಿಗೆ 328 ರನ್ ಗಳ ಗುರಿ ಬೆನ್ನಟ್ಟಿದ ಭಾರತ, ನಾಲ್ಕನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 4 ರನ್ ಗಳಿಸಿತ್ತು.

ಇನ್ನು ಕೊನೆಯ ದಿನ ಭಾರತಕ್ಕೆ ಗೆಲ್ಲಲು 325 ರನ್ನುಗಳ ಅವಶ್ಯಕತೆ ಇತ್ತು. ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಮನಮೋಹಕ 91 ರನ್ನು ಹಾಗೂ ಮಧ್ಯಮ ಕ್ರಮಾಂಕದಲ್ಲಿ ಯಶವಂತ್ ಅವರ ಬಿರುಸಿನ 89 ಜನಗಳ ಸಹಾಯದಿಂದ ಟೀಮ್ ಇಂಡಿಯಾ ಮೂರು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಇತಿಹಾಸ ಇದು. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅನ್ನೋದನ್ನ ನಮಗೆ ಕಮೆಂಟ್ ಮಾಡಿ ತಿಳಿಸಿ.